ಪದವಿ ವಿದ್ಯಾರ್ಥಿನಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಪದವಿ ವಿದ್ಯಾರ್ಥಿನಿಯೋರ್ವೆ ಮನೆಯ  ಬೆಡ್‌ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಾಸರಗೋಡು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೀಪುಗುರಿ ಶೆಟ್ಟಿಗದ್ದೆಯ ಗಿರೀಶ್-ದೀಪಿಕಾ ದಂಪತಿಯ ಪುತ್ರಿ ಪ್ರತ್ಯೂಕ (19) ಸಾವಿಗೆ ಶರಣಾದ ವಿದ್ಯಾರ್ಥಿನಿ. ನಿನ್ನೆ ಮಧ್ಯಾಹ್ನ ವೇಳೆ ಪ್ರತ್ಯೂಕ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಪ್ಲಸ್‌ಟು ಬಳಿಕ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರು ದಿನಗಳ ಹಿಂದೆಯಷ್ಟೇ ಈಕೆ ಪದವಿ ಶಿಕ್ಷಣಕ್ಕೆ ಸೇರಿದ್ದಳು. ನಿನ್ನೆ ಈಕೆ ಕಾಲೇಜಿಗೆ ಹೋಗಿರಲಿಲ್ಲ. ಘಟನೆ ಬಗ್ಗೆ   ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಮೃತಳು ತಂದೆ, ತಾಯಿ, ಏಕ ಸಹೋದರ ಪ್ರತ್ಯೂಕ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾಳೆ.

RELATED NEWS

You cannot copy contents of this page