ಬದಿಯಡ್ಕದಲ್ಲಿ ವಿಬಿ ಜಿ ರಾಮ್ ಜಿ ಆರಂಭದ ನೇರಪ್ರಸಾರ ವೀಕ್ಷಣೆ

ಬದಿಯಡ್ಕ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಿಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ವಿಬಿ ಜಿ ರಾಮ್ ಜಿ (ವಿಕಸಿತ್ ಭಾರತ್ – ಗ್ಯಾರಂಟಿ ಫಾರ್ ರೋಜ್‌ಗಾರ್ ಆಂಡ್ ಆಜೀವಿಕಾ ಮಿಷನ್ – ಗ್ರಾಮೀಣ್) ಯೋಜನೆಯ ಆರಂಭದ ನೇರ ಪ್ರಸಾರ ವೀಕ್ಷಣೆ ಬದಿಯಡ್ಕ ಪಂಚಾಯತ್ ಸಭಾಂಗಣದಲ್ಲಿ ಜರಗಿತು.
ದೇಶದಾದ್ಯಂತ ಜುಲೈ ೧ರಿಂದ ಅಧಿಕೃತವಾಗಿ ಅನುಷ್ಠಾನಕ್ಕೆ ಬಂದಿರುವ ಈ ಯೋಜನೆಯ ರಾಷ್ಟ್ರೀಯ ಉದ್ಘಾಟನಾ ಸಮಾರಂಭದ ನೇರ ಪ್ರಸಾರಕ್ಕೆ ಪಂಚಾಯತ್ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬದಿಯಡ್ಕ ಪಂಚಾಯತ್ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಕ್ಷೇಮಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ರಜನಿ ಜಿ.ಆರ್., ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಅವಿನಾಶ್ ರೈ, ಸದಸ್ಯರು ಪಾಲ್ಗೊಂಡಿದ್ದರು.

RELATED NEWS

You cannot copy contents of this page