ಗೃಹಿಣಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಬದಿಯಡ್ಕ:  ಗೃಹಿಣಿಯೋರ್ವೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ನಲ್ಕ ನಿವಾಸಿ ನಾರಾಯಣ ಎಂಬವರ ಪತ್ನಿಯೂ ಕಳೆದ ಕೆಲವು ವರ್ಷಗಳಿಂದ ಬೀಜದಕಟ್ಟೆಯ ತಾಯಿ ಮನೆಯಲ್ಲಿ ವಾಸಿಸುತ್ತಿದ್ದ ಲಕ್ಷ್ಮಿ ಯಾನೆ ನಳಿನಿ (60) ಎಂಬವರು ಮೃತಪಟ್ಟ ಮಹಿಳೆ. ನಿನ್ನೆ ರಾತ್ರಿ ಲಕ್ಷ್ಮಿ ಊಟಮಾಡಿ ನಿದ್ರಿಸಿದ್ದರು. ಇಂದು ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ಮನೆ ಸಮೀಪದ ಕೊಟ್ಟಿಗೆಯಲ್ಲಿ ಇವರು ನೇಣುಬಿಗಿದು ಸಾವಿಗೀಡಾ ಗಿರುವುದು ಕಂಡುಬಂದಿದೆ. ಈ ಬಗ್ಗೆ ಮನೆಯವರು ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮೃತದೇಹ ವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು  ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತರು ಸಹೋದರ-ಸಹೋದ ರಿಯರಾದ ನಾರಾ ಯಣ, ಶೇಷಪ್ಪ, ಕೃಷ್ಣ,ಸುಂದರಿ, ಶಶಿ,ಕಮಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

You cannot copy contents of this page