ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷ  ಬಿ. ವಿಕ್ರಮ್ ಪೈಗೆ ಅಭಿನಂದನೆ

ಕುಂಬಳೆ: ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷರಾಗಿ ಆಯ್ಕೆ ಯಾದ ಬಿ. ವಿಕ್ರಮ್ ಪೈಯವರನ್ನು ಕುಂಬಳೆ ಪಂಚಾಯತ್ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಪಂಚಾಯತ್ ಸಮಿತಿ ಅಧ್ಯಕ್ಷ ಸುಜಿತ್ ರೈ ಅಧ್ಯಕ್ಷತೆ ವಹಿಸಿದರು. ಮಂಡಲ ಅಧ್ಯಕ್ಷರಾಗಿ ಆಯ್ಕೆಯಾದ ವಿಕ್ರಮ್ ಪೈಯವರನ್ನು ಅಭಿನಂದಿಸಲಾ ಯಿತು. ಡಿಜಿಟಲ್ ಪ್ರಾಮುಖ್ಯತೆಯ ಬಗ್ಗೆ ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್ ವಿವರಿಸಿದರು. ಜಿಲ್ಲಾ ಕಾರ್ಯದರ್ಶಿ ಯು. ಲೋಕೇಶ್ ನೋಂಡಾ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ಎಸ್., ಬಿಜೆಪಿ ಉತ್ತರ ಸಮಿತಿ ಅಧ್ಯಕ್ಷ ಶಿವದಾಸ ರೈ, ಒಬಿಸಿ ಮೋರ್ಚಾ ಮಂಡಲ ಅಧ್ಯಕ್ಷ ಮಹೇಶ್ ಪುಣಿಯೂರು ಮಾತನಾಡಿದರು. ಪಂಚಾಯತ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಶೆಟ್ಟಿ ಸ್ವಾಗತಿಸಿ, ಸದಸ್ಯ ಐತ್ತಪ್ಪ ವಂದಿಸಿದರು.

You cannot copy contents of this page