ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆ.ಯು.ಡಬ್ಲ್ಯೂ.ಜೆ.) ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ‘ಸ್ನೇಹ ತರಂಗ’ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಆ.೧೬ರಂದು ಬೆಳಗ್ಗೆ 9.30ರಿಂದ ಕಾಸರಗೋಡು ಹೊಸ ಬಸ್ ನಿಲ್ದಾಣದ ಬಳಿಯ ಕಾಸರಗೋಡು ಸೇವಾ ಸಹಕಾರಿ ಬ್ಯಾಂಕ್ ಹಾಲ್ನಲ್ಲಿ ನಡೆಯಲಿದೆ.
ಹಿರಿಯ ಪತ್ರಕರ್ತ, ಕನ್ನಡಪರ ಹೋರಾಟಗಾರ ಅಶೋಕ ಯಂಕಪ್ಪ ಚಂದರಗಿ ಬೆಳಗಾವಿ ಉದ್ಘಾಟಿಸುವರು. ಶಾಸಕ ಕಲ್ಲಟ್ರ ಮಾಹಿನ್ ಹಾಜಿ, ಧಾರ್ಮಿಕ ಮುಂದಾಳು ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಸ್ನೇಹ ಸಂದೇಶ ನೀಡುವರು.
ಶ್ರೇಷ್ಠ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿ, ಗ್ಲೋಬಲ್ ಐಕಾನ್ ಹೆಲ್ತ್ ಕೇರ್ ಪ್ರಶಸ್ತಿ ವಿಜೇತ ಡಾ.ಮಲ್ಲಿಕಾರ್ಜುನ ಎಸ್. ನಾಸಿ, ರಾಷ್ಟ್ರೀಯ ಗೌರವ ಐಕಾನ್ ಪ್ರಶಸ್ತಿ ವಿಜೇತ ಶಾಫಿ ಬಂಡಸಾಲೆ, ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ಬೈಲ್ರಿಗೆ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ಸ್ನೇಹ ಗೌರವ ಪ್ರದಾನಮÁಡುವರು. ಹಲವರು ಮಾತನಾಡುವರು.







