ಕುಂಬಳೆ: ಗೋಣಿ ಚೀಲಗಳಲ್ಲಿ ತುಂಬಿಸಿದ್ದ ತ್ಯಾಜ್ಯವನ್ನು ಕಾರಿನಲ್ಲಿ ತಂದು ರಸ್ತೆಬದಿ ಎಸೆಯುತ್ತಿರುವುದು ಪತ್ತೆಯಾಗಿದೆ. ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಕುಂಬಳೆ ಪಂಚಾಯತ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ ಬೆಳಿಗ್ಗೆ ನಾಯ್ಕಾಪಿನಲ್ಲಿ ತ್ಯಾಜ್ಯ ಎಸೆಯಲಾಗಿದೆ. ಕಾರಿನಲ್ಲಿ ಬಂದ ವ್ಯಕ್ತಿ ರಸ್ತೆ ಬದಿ ಕಾರು ನಿಲ್ಲಿಸಿ ಮೂರು ಗೋಣಿ ಚೀಲಗಳಲ್ಲಿ ತುಂಬಿಸಿಟ್ಟಿದ್ದ ತ್ಯಾಜ್ಯವನ್ನು ರಸ್ತೆ ಬದಿ ಎಸೆದಿದ್ದಾನೆ. ಈ ದೃಶ್ಯ ಈ ಪರಿಸರದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ನಾಗರಿಕರು ಸಂಗ್ರಹಿಸಿ ಪಂಚಾಯತ್ ಅಧಿಕಾರಿಗಳಿಗೆ ನೀಡಿದ್ದಾರೆ. ಇದರಂತೆ ಪಂಚಾಯತ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.






