ಕಾಸರಗೋಡು: ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಗಳಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿಗಳಾದ ರಿಸ್ವಾನ್ (೨೩), ಮುಹಮ್ಮದ್ ಸ್ವಾದ್(19) ಎಂಬಿವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. 14 ಹಾಗೂ 19ರ ಹರೆಯದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಂತೆ ಇವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯರನ್ನು ಆರೋಪಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ಪರಿಚಯಗೊಂಡಿದ್ದರೆನ್ನ ಲಾಗಿದೆ. ಬಳಿಕ ಬಾಲಕಿಯರನ್ನು ಉಳ್ಳಾಲದ ಲಾಡ್ಜ್‌ವೊಂದಕ್ಕೆ ಕರೆದೊ ಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕಿ ಯರು ನೀಡಿದ ದೂರಿನಂತೆ ಹೊಸದುರ್ಗ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿಕೊಂಡಿದ್ದರು.
ಇದೇ ರೀತಿ ಇನ್ನೊಂದು ಪೋಕ್ಸೋ ಪ್ರಕರಣದಲ್ಲಿ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂದ್ಯೋಡು ಮಳ್ಳಂಗೈ ಮದೀನ ಮಂಜಿಲ್‌ನ ನಿಸಾಮುದ್ದೀನ್ (19) ಎಂಬಾತ ಬಂಧಿತ ಆರೋಪಿಯಾಗಿ ದ್ದಾನೆ. 17ರ ಹರೆಯದ ಬಾಲಕಿಗೆ ನಿಸಾಮುದ್ದೀನ್ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಇದರಂತೆ ಕುಂಬಳೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಕೊಂಡಿದ್ದರು. ಆರೋಪಿಯನ್ನು ಇಂದು ನ್ಯಾಯಾಲಯದಲ್ಲಿ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.






