ಪೆರ್ಲ: ಜ್ವರ ಬಾಧಿಸಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅಸೌಖ್ಯ ಉಲ್ಭಣಗೊಂಡು ಮೃತಪಟ್ಟ ಘಟನೆ ನಡೆದಿದೆ.
ಪಡ್ರೆ ಸಜಂಗದ್ದೆ ನಿವಾಸಿ ತಿಲು ನಾಯ್ಕ (58) ಎಂಬವರು ಮೃತಪಟ್ಟ ವ್ಯಕ್ತಿ. ಇವರು ಕೂಲಿ ಕಾರ್ಮಿಕನಾ ಗಿದ್ದರು. ಇತ್ತೀಚೆಗಿನಿಂದ ಇವರಿಗೆ ಜ್ವರ ಬಾಧಿಸಿತ್ತೆನ್ನಲಾಗಿದೆ. ಇದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಮನೆಯಲ್ಲಿದ್ದ ಇವರು ನಿನ್ನೆ ಮಧ್ಯಾಹ್ನ 2.15ರ ವೇಳೆ ಅರೆಪ್ರ ಜ್ಞಾವಸ್ಥೆಯಲ್ಲಿ ಕಂಡುಬಂದಿದ್ದಾರೆ. ತಕ್ಷಣ ಉಕ್ಕಿನಡ್ಕ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೃತದೇಹ ವನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ತಲುಪಿಸಿದ್ದು, ಇಂದು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗು ವುದ. ಮೃತರು ಪತ್ನಿ ಲಲಿತ, ಪುತ್ರ ಯೋಗೀಶ, ಸೊಸೆ ಕೃತಿಕ, ಸಹೋದರ ಗೋವಿಂದ ನಾಯ್ಕ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.






