ಬದಿಯಡ್ಕ: ಶಾಲೆಗೆ ನಡೆದು ಹೋಗುತ್ತಿದ್ದ ೧೩ರ ಹರೆಯದ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಳ್ಳತ್ತಡ್ಕ ನಿವಾಸಿಯಾದ ರಮೇಶ್ (43) ಎಂಬಾತನನ್ನು ಬದಿಯಡ್ಕ ಎಸ್ಐ ಸುನಿಲ್ ಕುಮಾರ್ ಹಾಗೂ ತಂಡ ಸೆರೆ ಹಿಡಿದಿದೆ. ಮೂರು ದಿನಗಳ ಹಿಂದೆಯಷ್ಟೇ ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿತ್ತು. ಶಾಲೆಗೆ ನಡೆದು ಹೋಗುತ್ತಿದ್ದ ಬಾಲಕಿಯನ್ನು ದಾರಿಯಲ್ಲಿ ತಡೆದು ನಿಲ್ಲಿಸಿ ದೇಹ ಸ್ಪರ್ಶಿಸಿ ಕಿರುಕುಳಕ್ಕೆತ್ನಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಲಭಿಸಿದ ದೂರಿನಂತೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿ ವಿವಿಧ ಪ್ರದೇಶಗಳ ಸಿಸಿಟಿವಿ ಕ್ಯಾಮರಾಗಳ ದೃಶ್ಯಗಳನ್ನು ಪರಿಶೀಲಿಸಿದಾಗ ಆರೋಪಿಯ ಗುರುತು ಹಚ್ಚಲು ಸಾಧ್ಯವಾಗಿದೆ. ಆರೋಪಿಯನ್ನು ಸೆರೆ ಹಿಡಿದ ಪೊಲೀಸ್ ತಂಡದಲ್ಲಿ ಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್ ಗೋಕುಲ್, ಸಿವಿಲ್ ಪೊಲೀಸ್ ಆಫೀಸರ್ಗಳಾದ ಶಿಬಿನ್, ಧನೇಶ್ ಎಂಬಿವರಿದ್ದರು.






