ಮನೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಕುಂಬಳೆ: ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯನ್ನು ನೆರೆಮನೆಯವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಸಾವನ್ನಪ್ಪಿದ ಘಟನೆ ನಡೆದಿದೆ. ಕೊಪಾಡಿ ಸಿದ್ಧಿಬೈಲು ನಿವಾಸಿ ಪವನೇಶ್ (64) ಸಾವನ್ನಪ್ಪಿದ ವ್ಯಕ್ತಿ. ಇವರು ನಿನ್ನೆ ಸಂಜೆ ಅವರ ಮನೆ ಕೊಠಡಿಯೊಳಗೆ  ಒರಗಿ ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾ ಗಿದ್ದರು. ಅದನ್ನು ಕಂಡ ನೆರೆಮನೆಯ ಪ್ರಕಾಶ್ ಮತ್ತು ಇನ್ನೋರ್ವರು ಸೇರಿ ತಕ್ಷಣ ಆಸ್ಪತ್ರೆಗೆ ಸಾಗಿಸಿದರು. ವೈದ್ಯರು ಪರೀಕ್ಷಿಸಿದ ವೇಳೆ ಸಾವನ್ನಪ್ಪಿರು ವುದಾಗಿ ದೃಢಪಡಿಸಿದ್ದಾರೆ. ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮೃತರು ಪತ್ನಿ ಪಾರ್ವತಿ, ಓರ್ವೆ ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page