ಮಂಜೇಶ್ವರ: ಶಾಂತಿಯುತ ವಾತಾವರಣವಿರುವ ಪ್ರದೇಶದಲ್ಲಿ ಉದ್ದೇಶಪೂರ್ವಕವಾಗಿ ಉದ್ವಿಗ್ನತೆ ಸೃಷ್ಟಿಸಲು ಯೂತ್ ಲೀಗ್ ಕಾರ್ಯಕರ್ತರು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಜಿ¯sÁ್ಲಧ್ಯಕ್ಷೆ ಎಂ. ಎಲ್. ಅಶ್ವಿನಿ ಆರೋಪಿಸಿದ್ದಾರೆ.
ಹಲವು ವರ್ಷಗಳಿಂದ ಗಣೇಶೋತ್ಸವ ನಡೆಯುತ್ತಿರುವ ಸ್ಥಳದಲ್ಲಿ ಉತ್ಸವದ ಅಂಗವಾಗಿ ತಾತ್ಕಾಲಿಕ ಪೆಂಡಾಲ್ ನಿರ್ಮಿಸಿz್ದÀಕ್ಕಾಗಿ ಮುಸ್ಲಿಂ ಲೀಗ್ ಕಾರ್ಯಕರ್ತರು ಅನಗತ್ಯವಾಗಿ ಗೊಂದಲ ಸೃಷ್ಟಿಸಿ, ಸಂಘರ್ಷದ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಲೋಕೇಶ್ ನೊಂಡ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಶಾಂತಿಯುತ ವಾತಾವರಣವಿರುವ ಸಂದರ್ಭದಲ್ಲಿ ಅದಕ್ಕೆ ಭಂಗ ತರುವಂತಹ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ವ್ಯಕ್ತಿಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಮತ್ತು ಪ್ರಚೋದನಕಾರಿ ಚಟುವಟಿಕೆಗಳ ಮೂಲಕ ಉದ್ವಿಗ್ನತೆ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಲೋಕೇಶ್ ನೋಂಡ ಅವರ ಮೇಲಿನ ಹಲ್ಲೆ ಯತ್ನದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಕೊಲೆ ಯತ್ನ, ಜೀವ ಬೆದರಿಕೆ ಹಾಗೂ ಪ್ರದೇಶದಲ್ಲಿ ಶಾಂತಿ ಭಂಗ ಉಂಟುಮಾಡುವAತಹ ಪ್ರಚೋದನಕಾರಿ ಕೃತ್ಯಗಳ ಅಡಿಯಲ್ಲಿ ಸೂಕ್ತ ಕಾನೂನು ಸೆಕ್ಷನ್‌ಗಳನ್ನು ದಾಖಲಿಸಿ ಪ್ರಕರಣ ದಾಖಲಿಸಬೇ ಕೆಂದು ಬಿಜೆಪಿ ಒತ್ತಾಯಿಸಿದೆ.
ನಾಡಿನ ಶಾಂತಿ ಸುವ್ಯವಸ್ಥೆಯನ್ನು ಹಾಳುಮಾಡುವ ಇಂತಹ ಯತ್ನ ಗಳಿಂದ ಮುಸ್ಲಿಂ ಲೀಗ್ ನಾಯಕತ್ವ ಹಿಂದೆ ಸರಿಯಬೇಕು. ಜನರ ನಡುವೆ ಒಡಕು ಮತ್ತು ಸಂಘರ್ಷ ಮೂಡಿಸಲು ಯತ್ನಿಸುವವರ ವಿರುದ್ಧ ಕಾನೂನಾತ್ಮ ಕವಾಗಿ ಹಾಗೂ ಪ್ರಜಾಸತ್ತಾತ್ಮಕವಾಗಿ ತಕ್ಕ ಉತ್ತರ ನೀಡಲಾಗುವುದು ಎಂದು ಎಂ. ಎಲ್. ಅಶ್ವಿನಿ ಎಚ್ಚರಿಸಿದ್ದಾರೆ.






