ಕಾಸರಗೋಡು: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ 25 ವರ್ಷ ಪೂರ್ಣಗೊಳಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರಮೋ ದಿಯವರ ಆಯು ರಾರೋಗ್ಯ ಹಾಗೂ ಸುಖಕ್ಕಾಗಿ ಅವರ ಜನ್ಮ ದಿನವಾದ ಇಂದು ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಉದಯಾಸ್ತಮಾನ ಪೂಜೆ ಸಲ್ಲಿಸಲಾಯಿತು. ಇದರೊಂದಿಗೆ ಒಂದು ತಿಂಗಳ ಕಾಲ ನಡೆಯಲಿರುವ ‘ಸೇವಾ ಸಂಕಲ್ಪ ಅಭಿಯಾನ್’ ಕಾರ್ಯಕ್ರಮಗಳಿಗೆ ಜಿಲ್ಲೆಯಲ್ಲಿ ಚಾಲನೆ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ಕಾರ್ಯದರ್ಶಿ ಪ್ರಮೀಳಾ ಮಜಲ್, ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜ್ಞಾನಿ ಶ್ಯಾನುಭೋಗ್, ಮಾಜಿ ಅಧ್ಯಕ್ಷ ಕೆ. ಗೋಪಾಲಕೃಷ್ಣ, ಜನಪ್ರತಿನಿಧಿಗಳಾದ ಮಾಧವ, ಗಣೇಶ್ ಮೀಪುಗುರಿ, ಯೋಗೇಶ್, ಮಹೇಶ್ ಮಧೂರು, ಅನಿಲ್ ಪಕ್ಕಳ, ಮಹಿಳಾ ಮೋರ್ಛಾ ಜಿಲ್ಲಾ ಕಾರ್ಯದರ್ಶಿ ಮಮತಾ ಸಾಗರ್, ಅಶ್ವಿತ ಸೇರಿದಂತೆ ಹಲವರು ಭಾಗವಹಿಸಿದರು. ಇಂದು ಸಂಜೆ ೬ ಗಂಟೆಗೆ ಕಾಸರಗೋಡು ಅಮೃತ್ ಭಾರತ್ ರೈಲು ನಿಲ್ದಾಣದ ಆವರಣದಲ್ಲಿ ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮದಂಗವಾಗಿ ದೀಪ ಗಳನ್ನು ಬೆಳಗಿಸಲಾಗುವುದು.







