ಬೀದಿ ನಾಯಿಗಳ ಹಾವಳಿ: ಮಂಜೇಶ್ವರ ಪಂ.ನಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ

ಮಂಜೇಶ್ವರ: ಮಂಜೇಶ್ವರ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಗೆ ಮುಕ್ತಿ ನೀಡಲು ಪಂಚಾ ಯತ್ ಆಡಳಿತ ಮಂಡಳಿ ಸೂಕ್ತ ಕ್ರಮಕ್ಕೆ ಮುಂದಾಗಿದೆ. ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪಂ. ಅಧ್ಯಕ್ಷರ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಹಾಗೂ ಸಂಬAಧಪಟ್ಟ ಹಿರಿಯ ಅಧಿಕಾರಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಇದರ ಫಲಶ್ರುತಿಯಾಗಿ, ಮಲಪ್ಪುರಂ ಜಿಲ್ಲೆಯಿಂದ ಆಗಮಿಸಿದ ‘ಅನಿಮಲ್ ರೆಸ್ಕ್ಯೂ ಫೋರ್ಸ್’ ತಂಡ ಪಂಚಾಯತ್‌ನ ವಾರ್ಡ್ಗಳಿಗೆ ತೆರಳಿ ಬೀದಿ ನಾಯಿಗಳಿಗೆ ರೇಬಿಸ್ ನಿರೋಧಕ ಚುಚ್ಚುಮದ್ದು ನೀಡುವ ಕಾರ್ಯವನ್ನು ಭರದಿಂದ ನಡೆಸುತ್ತಿದೆ. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ, ಉಪಾಧ್ಯಕ್ಷೆ ಫಾತಿಮತ್ ಸುಹರಾ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ಕೆ.ಎಂ.ಕೆ, ಸದಸ್ಯೆಯರಾದ ಫರ್ಹಾನ ಟೀಚರ್, ಸಬೀನಾ ಉಪಸ್ಥಿತರಿದ್ದರು.

RELATED NEWS

You cannot copy contents of this page