ಕಾಸರಗೋಡು: ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿಯಲು ಯತ್ನಿಸಿದ ಯುವಕನನ್ನು ಸ್ಥಳೀಯರು ಸೇರಿ ಸೆರೆ ಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪಶ್ಚಿಮ ಬಂಗಾಳ ನಿವಾಸಿ ಮಾಲಿಕ್ ಹುಸೈನ್ (21)ನನ್ನು ಸೆರೆ ಹಿಡಿಯಲಾಗಿದ್ದು, ಈತನನ್ನು ಪೊಲೀಸರು ಪ್ರಶ್ನಿಸುತ್ತಿದ್ದಾರೆ. ತೃಕರಿಪುರ ತಂಗಯದಲ್ಲಿ ಘಟನೆ ನಡೆದಿದೆ. ನಿರ್ಮಾಣ ಕೆಲಸಕ್ಕೆಂದು ಮಾಲಿಕ್ ಹುಸೈನ್ ಸಹಿತದ ತಂಡ ಮನೆಗೆ ತಲುಪಿತ್ತು. ಈತ ಕೆಲಸ ಮಾಡುತ್ತಿದ್ದ ವೇಳೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್ನಲ್ಲಿ ಈತ ಸೆರೆ ಹಿಡಿದಿದ್ದಾನೆ. ಈ ವಿಷಯ ಗಮನಕ್ಕೆ ಬಂದು ಮನೆ ಮಂದಿ ಬೊಬ್ಬೆ ಹಾಕಿದಾಗ ಸ್ಥಳೀಯರು ಓಡಿ ಬಂದು ಹುಸೈನ್ನನ್ನು ಸೆರೆ ಹಿಡಿದಿದ್ದಾರೆ. ಬಳಿಕ ಚಂದೇರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.






