ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆ

ಸೀತಾಂಗೋಳಿ: ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ 2025-26ನೇ ವರ್ಷದ ವಾರ್ಷಿಕ ಮಹಾಸಭೆ ಬ್ಯಾಂಕ್‌ನ ಪ್ರಧಾನ ಕಚೇರಿಯ ಸಮನ್ವಯ ಸಭಾಭವನದಲ್ಲಿ ಜರಗಿತು. ಬ್ಯಾಂಕ್‌ನ ಅಧ್ಯಕ್ಷ ಶ್ಯಾಮರಾಜ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶರ ಡಿ ಎಸ್ ಪ್ರಾರ್ಥನೆ ಹಾಡಿದಳು. ಉಪಾಧ್ಯಕ್ಷೆ ಹರಿಣಿ ಜಿ.ಕೆ ನಾಯಕ್ ಸ್ವಾಗತಿಸಿದರು. ಬ್ಯಾಂಕ್‌ನ ಕಾರ್ಯದರ್ಶಿ ಶ್ರೀಕೃಷ್ಣ ಭಟ್ ವರದಿ ವಾಚಿಸಿದರು. ಎಸ್ ಎಸ್ ಎಲ್ ಸಿ ಯಲ್ಲಿ ಎಲ್ಲಾ ವಿಷಯಗಳಲ್ಲಿಯೂ ಎ ಪ್ಲಸ್ ಪಡೆದ ಬ್ಯಾಂಕ್‌ನ ಸದಸ್ಯರ ಮೂರು ಜನ ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಸಭೆಯ ಪ್ರಾರಂಭದಲ್ಲಿ ಅಗಲಿದ ಬ್ಯಾಂಕ್‌ನ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಿರ್ದೇಶಕರಾದ ಕೃಷ್ಣ ಪ್ರಸಾದ ಕಾವೇರಿ ನರ್ಸರಿಯ ಲೆಕ್ಕಪತ್ರಗಳನ್ನು ಸಭೆಯ ಮುಂದಿಟ್ಟರು. ನಿರ್ದೇಶಕರಾದ ಅನಂತ ಎಮ್ ಧನ್ಯವಾದವಿತ್ತರು. ನಿರ್ದೇಶಕರು, ಸದಸ್ಯರು, ಸಿಬಂದಿವರ್ಗದವರು ಉಪಸ್ಥಿತರಿದ್ದರು.

RELATED NEWS

You cannot copy contents of this page