ಕಾಸರಗೋಡು: ಅಸ್ವಸ್ಥತೆ ಕಂಡುಬಂದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ ರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳು ನೀಡಿದ ಮಾಹಿತಿಯಂತೆ ವೆಳ್ಳರಿಕುಂಡ್ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬಾಲಕಿಯ ಸ್ನೇಹಿತನಾದ 18ರ ಹರೆಯದ ಯುವಕನ ವಿರುದ್ಧ ಪೋಕ್ಸೋ ಕೇಸು ದಾಖಲಿಸಲಾಗಿದೆ. ಈತನನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೈಹಿಕ ಅಸ್ವಸ್ಥತೆ ಕಂಡುಬಂದ ಹಿನ್ನೆಲೆಯಲ್ಲಿ ಬಾಲಕಿ ಆಸ್ಪತ್ರೆಗೆ ತಲುಪಿದ್ದಳು. ವೈದ್ಯರು ತಪಾಸಣೆ ನಡೆಸಿದಾಗ ಬಾಲಕಿ ೪ ತಿಂಗಳ ಗರ್ಭಿಣಿಯಾಗಿದ್ದಾಳೆಂದು ತಿಳಿದುಬಂದಿದೆ.






