17ರ ಹರೆಯದ ಬಾಲಕಿ ಗರ್ಭಿಣಿ : 45ರ ವ್ಯಕ್ತಿ ವಿರುದ್ಧ ಪೋಕ್ಸೋ ಕೇಸು

ಬದಿಯಡ್ಕ: 45ರ ಹರೆಯದ ವ್ಯಕ್ತಿಯಿಂದ ಲೈಂಗಿಕ ಕಿರುಕುಳಕ್ಕೊಳಗಾದ 17ರ ಹರೆಯದ ಬಾಲಕಿ ಗರ್ಭಿಣಿಯಾಗಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಬದಿಯಡ್ಕ ಪೊಲೀಸರು ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕಾರ ಕೇಸು ದಾಖಲಿಸಿ  ತನಿಖೆ ಆರಂಭಿಸಿದ್ದಾರೆ.  ಅಸಹನೀಯ ಹೊಟ್ಟೆ ನೋವು ಅನುಭವಗೊಂಡ ಬಾಲಕಿ  ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದಾಗಲೇ ಆಕೆ ಗರ್ಭಿಣಿಯಾಗಿದ್ದಾಳೆಂಬ ವಿಷಯ ತಿಳಿದುಬಂದಿದೆ. ಈ ಬಗ್ಗೆ ವೈದ್ಯರು  ಬದಿಯಡ್ಕ ಪೊಲೀಸರಿಗೆ ತಿಳಿಸಿದ್ದಾರೆ. ಇದರಂತೆ ಪೊಲೀಸರು ಬಾಲಕಿಯಿಂದ ಮಾಹಿತಿ ಸಂಗ್ರಹಿಸಿಕೊಂಡ ಬಳಿಕ ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದಾರೆ.    ಆರೋಪಿಯನ್ನು ಪತ್ತೆಹಚ್ಚಲು  ಪೊಲೀಸರು ತನಿಖೆ ಆರಂಭಿಸಿದ್ದಾರೆ.

You cannot copy contents of this page