ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ: ಹಲವು ಮಾದಕದ್ರವ್ಯ ಪ್ರಕರಣಗಳ ಆರೋಪಿ ಸೆರೆ

ಕಾಸರಗೋಡು: ನಗರದ ನೆಲ್ಲಿಕುಂಜೆ ಲೈಟ್ ಹೌಸ್ ಬಳಿ ಕಾಸರಗೋಡು ಪೊಲೀಸ್ ಇನ್ಸ್‌ಪೆಕ್ಟರ್ ಮೆಲ್ವಿನ್ ಜೋಸ್‌ರ ನೇತೃತ್ವದ ಪೊಲೀಸರು ನಿನ್ನೆ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 69.510 ಗ್ರಾಂ ಗಾಂಜಾ ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಲತಃ ಕಾಸರಗೋಡು ತಾಯಲಂಗಾಡಿ ಕೆ.ಇ. ವಳಪ್ಪಿಲ್ ಹೌಸ್‌ನ ನಿವಾಸಿ ಹಾಗೂ ಈಗ ಉಳಿಯತ್ತಡ್ಕ ಎಸ್‌ಪಿ ನಗರದಲ್ಲಿ ವಾಸಿಸುತ್ತಿರುವ ಅಬ್ದುಲ್ ಖಾದರ್ ಕೆ.ಇ. ಅಲಿಯಾಸ್ ರ‍್ಯಾಂಬೋ ಖಾದರ್ (56) ಬಂಧಿತ ಆರೋಪಿ. ಬಂಧಿತನು ಹಲವು ಮಾದಕ ದ್ರವ್ಯ ಪ್ರಕರಣಗಳ ಆರೋಪಿಯಾಗಿದ್ದಾನೆ. ಅದಕ್ಕೆ ಸಂಬಂಧಿಸಿ ಪಿಟ್ ಎನ್‌ಡಿಪಿಎಸ್ ಆಕ್ಟ್ ಪ್ರಕಾರ ಆತನನ್ನು ಈ ಹಿಂದೆ ನಿಗದಿತ ಸಮಯದ ನಂತರ ಜಿಲ್ಲೆಯಿಂದ ಗಡಿಪಾರು ಮಾಡಲಾಗಿತ್ತು. ಆ ಅವಧಿ ಮುಗಿದ ಬಳಿಕ ದಿನಗಳ ಹಿಂದೆಯಷ್ಟೇ ಅತ ಊರಿಗೆ ಹಿಂತಿರುಗಿ ದ್ದನೆಂದು ಪೊಲೀಸರು ತಿಳಿಸಿದ್ದಾರೆ.

You cannot copy contents of this page