ಕುಂಬಳೆ: ಬಿಜೆಪಿ ಕುಂಬಳೆ ಮಂಡಲ ಸಮಿತಿ ವತಿಯಿಂದ ಸೇವಾ ಸಂಕಲ್ಪ ಅಭಿಯಾನ ಮೋದಿ 25ರ ಅಂಗವಾಗಿ ಆಯೋಜಿಸಲಾದ ಸೇವಾ ಸೇತು ಅಭಿಯಾನ ಕಾರ್ಯಕ್ರಮ ಕುಂಬಳೆ ಜಯಮಾರುತಿ ವ್ಯಾಯಾಮ ಶಾಲೆಯಲ್ಲಿ ನಡೆಯಿತು.
ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇ± Àದಿಂದ ಆಯೋಜಿಸಲಾದ ಈ ಕಾರ್ಯ ಕ್ರಮದಲ್ಲಿ ಉಚಿತ ವೈದ್ಯಕೀಯ ತಪಾ ಸಣಾ ಶಿಬಿರ, ನೇತ್ರ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ ಹಾಗೂ ರಕ್ತ ತಪಾಸಣೆ ನಡೆಸಲಾ ಯಿತು. ಡಾ| ಸಾಗರ್ ನೇತ್ರ ತಪಾಸಣೆ ನಡೆಸಿದರು. ಕೇರಳ ಆಯುರ್ವೇದಿಕ್ ಸಂಸ್ಥೆಯ ಡಾ| ಪದ್ಮಿನಿ ರಾಮ್ ಕಿಶೋರ್ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ ನಡೆಸಿಕೊಟ್ಟರು. ಶಿವಕುಮಾರ್ ಅವರ ನೇತೃತ್ವದಲ್ಲಿ ರಕ್ತ ತಪಾಸಣೆ ನಡೆಸಲಾಯಿತು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್ ಉದ್ಘಾಟಿಸಿದರು. ಕುಂಬಳೆ ಮಂಡಲ ಅಧ್ಯಕ್ಷ ಬಿ. ವಿಕ್ರಮ್ ಪೈ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಉಪಾಧ್ಯಕ್ಷ, ಮಂಡಲ ಪ್ರಭಾರಿ ಪಿ. ರಮೇಶ್ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್ ವೈದ್ಯರನ್ನು ಹಾಗು ತಂಡವನ್ನು ಗೌರವಿಸಿದರು.
ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ಅಧ್ಯಕ್ಷ ಸುಜೀತ್ ರೈ, ಶಿವಪ್ರಸಾದ್ ರೈ, ಕುಂಬಳೆ ಸರ್ವೀಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಾಧಾಕೃಷ್ಣ ರೈ, ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಪಿ. ವಲ್ಸರಾಜ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ಎಸ್. ಗಟ್ಟಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ದ್ದರು. ಮಹೇಶ್ ಪುಣೆಯೂರ್ ಸ್ವಾಗತಿಸಿ, ಮಂಡಲ ಸಮಿತಿ ಸದಸ್ಯ ಶ್ರೀನಿವಾಸ್ ಆಳ್ವ ವಂದಿಸಿದರು.






