17ರ ಹರೆಯದ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ನೆಕ್ರಾಜೆಯಲ್ಲಿ ಪ್ಲಸ್ ಟು ವಿದ್ಯಾರ್ಥಿನಿ ಮಲಗುವ ಕೊಠಡಿಯ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವೋರ್ಕೂಡ್ಲು ಕನಿಯಾನ್‌ಮೂಲೆಯ ಜಯರಾಮರ ಪುತ್ರಿ ಧನುಷ (17) ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ವಿದ್ಯಾರ್ಥಿನಿ. ನಿನ್ನೆ ಸಂಜೆ 7 ಗಂಟೆ ವೇಳೆ ಧನುಷ ಶಾಲು ಉಪಯೋಗಿಸಿ ಫ್ಯಾನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಕೆಳಗಿಳಿಸಿ ಚೆರ್ಕಳದ ಖಾಸಗಿ ಆಸ್ಪತ್ರೆಗೆ ತಲುಪಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಘಟನೆಗೆ ಕಾರಣವೇನೆಂದು ಸ್ಪಷ್ಟಗೊಂಡಿಲ್ಲ.

ಕಲಿಕೆಯಲ್ಲಿ ಮುಂದಿದ್ದ ಧನುಷಳ ಮರಣ ಕುಟುಂಬ ಹಾಗೂ ಸ್ಥಳೀಯರಲ್ಲಿ ದುಃಖಕ್ಕೆ ಕಾರಣವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಸಂಬಂಧಿಕನಾದ ಎಂ. ರತೀಶ್ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿದ್ದಾರೆ. ಮೃತಳು ತಂದೆ, ತಾಯಿ ಬಿಂದು, ಸಹೋದರಿ ಧನ್ಯ, ಸಹೋದರ ಧನುಷ್ (ಕಣ್ಣನ್) ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾಳೆ.

RELATED NEWS

You cannot copy contents of this page