ರತ್ನಗಿರಿ ರಸ್ತೆಯ ದುಸ್ಥಿತಿಯಿಂದ ಸ್ಥಳೀಯರಿಗೆ  ಸಂಚಾರ ಸಮಸ್ಯೆ: ತಕ್ಷಣ ಪರಿಹಾರಕ್ಕೆ ಒತ್ತಾಯ

ನಿರ್ಚಾಲು: ಮೇಲಿನ ನಿರ್ಚಾಲುನಿಂದ ರತ್ನಗಿರಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಯು ಕಳಪೆ ಗುಣಮಟ್ಟದ ಕಾಂಕ್ರಿಟ್‌ನಿAದ ನಿರ್ಮಾಣಗೊಂಡಿದ್ದು, ಎರಡು ವಾಹನಗಳು ಎದುರುಬದುರಾಗಿ ಸಾಗಲು ಕೂಡ ಸಾಕಷ್ಟು ಜಾಗವಿಲ್ಲ. ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಂಟಿಗಳು ಬೆಳೆದು ನಿಂತಿದ್ದು, ರಸ್ತೆ ಬದಿಯ ಸ್ವಚ್ಛತೆಯೂ ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ. ಇದರಿಂದ ವಾಹನ ಸವಾರರಿಗೆ ಅಪಘಾತದ ಭೀತಿ ಎದುರಾಗಿದೆ.
ಶಾಲೆಗೆ ಹೋಗುವ ಮಕ್ಕಳು, ಕೆಲಸಕ್ಕೆ ತೆರಳುವ ಮಹಿಳೆಯರು ಹಾಗೂ ಸಾರ್ವಜನಿಕರು ಪ್ರತಿದಿನ ಈ ರಸ್ತೆಯನ್ನು ಅವಲಂಬಿsಸುತ್ತಿದ್ದಾರೆ. ಶಾಲೆ ಬಿಡುವ ಸಮಯದಲ್ಲಿ ಮತ್ತು ಸಂಜೆ ವೇಳೆ ಕೆಲವು ದ್ವಿಚಕ್ರ ವಾಹನ ಸವಾರರು ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿರುವ ಬಗ್ಗೆ ಸ್ಥಳೀಯರು ಆರೋಪಿಸುತ್ತಿದ್ದಾರೆ. ಅಲ್ಲದೆ, ರಸ್ತೆಯಲ್ಲಿ ಸಮರ್ಪಕವಾದ ಬೀದಿ ದೀಪಗಳ ವ್ಯವಸ್ಥೆಯೂ ಇಲ್ಲದಿರುವುದರಿಂದ ರಾತ್ರಿ ಸಂಚಾರ ಇನ್ನಷ್ಟು ಅಪಾಯಕಾರಿಯಾಗಿದೆ.
ಇದಲ್ಲದೆ, ಗಾಂಜಾ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಸಂಬAಧಿಸಿದ ಚಟುವಟಿಕೆಗಳು ಇಲ್ಲಿ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಚಟುವಟಿಕೆಗಳ ಬಗ್ಗೆ ಸಂಬAಧಪಟ್ಟ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು.
ಸಂಬAಧಪಟ್ಟ ಪಂಚಾಯತ್, ರಸ್ತೆ ನಿರ್ವಹಣಾ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ರಸ್ತೆಯ ಗುಣಮಟ್ಟವನ್ನು ಪರಿಶೀಲಿಸಿ, ಅಗತ್ಯವಿರುವ ಕಡೆ ದುರಸ್ತಿ ಕಾರ್ಯ ಕೈಗೊಳ್ಳಬೇಕು, ರಸ್ತೆ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡಬೇಕು, ಅಗತ್ಯವಿರುವ ಕಡೆ ರಸ್ತೆ ಅಗಲೀಕರಣ ಅಥವಾ ವಾಹನಗಳು ಸುಗಮವಾಗಿ ಸಂಚರಿಸಲು ಸೂಕ್ತ ವ್ಯವಸ್ಥೆ ಮಾಡಬೇಕು, ರಸ್ತೆಯುದ್ದಕ್ಕೂ ಅಗತ್ಯ ಸ್ಥಳಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು, ಶಾಲಾ ಮಕ್ಕಳು ಹಾಗೂ ಮಹಿಳೆಯರ ಸುರಕ್ಷತೆಗಾಗಿ ಶಾಲೆ ಬಿಡುವ ಸಮಯದಲ್ಲಿ ಮತ್ತು ಸಂಜೆ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು, ಗಾಂಜಾ ಮತ್ತು ಅಕ್ರಮ ಮದ್ಯ ಮಾರಾಟದ ಕುರಿತು ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ ಕಾನೂನ Äಬದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

RELATED NEWS

You cannot copy contents of this page