ರೈಲುಹಳಿಯಲ್ಲಿ ಕಂಡು ಬಂದ ಮೃತದೇಹದ ಗುರುತು ಇನ್ನೂ ಅಲಭ್ಯ

ಮಂಜೇಶ್ವರ: ಉಪ್ಪಳ ರೈಲ್ವೇ ಗೇಟ್ ಸಮೀಪದ ಅಂಚಿಕಟ್ಟೆ ಎಂಬಲ್ಲಿನ ರೈಲು ಹಳಿ ಸಮೀಪದ ಪೊದೆಯಲ್ಲಿ ಸುಮಾರು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಗಾಯಗೊಂಡ ಸ್ಥಿತಿಯಲ್ಲಿ ಕಂಡುಕಂದ್ ಮೃತದೇಹದ ಗುರುತು ಇನ್ನೂ ಪತ್ತೆಯಾಗಲಿಲ್ಲ. ಗುರುವಾರ ಸಂಜೆ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಥಳೀಯರ ಗಮನಕ್ಕೆ ಬಂದಿದ್ದು, ಕೂಡಲೇ ಅವರನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆ ವೇಳೆ ಮೃತಪಟ್ಟಿದ್ದರು. ಕಾಸರ ಗೋಡು- ಮಂಗಳೂರು ಭಾಗಕ್ಕೆ ಸಂಚರಿಸುತ್ತಿದ್ದ ರೈಲು ಗಾಡಿಯಿಂದ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ವಾರೀಸುದಾರರ ಪತ್ತೆಗಾಗಿ ಪ್ರಯತ್ನಿ ಸುತ್ತಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರ ದಲ್ಲಿರಿಸಲಾಗಿದೆ. ಈ ವ್ಯಕ್ತಿಯ ಮಾಹಿತಿ ಸಿಕ್ಕಿದ್ದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಗೆ ನೀಡಲು ವಿನಂತಿಸಿದ್ದಾರೆ.

RELATED NEWS

You cannot copy contents of this page