ಕಾಸರಗೋಡು: ಹದಿನೇಳರ ಹರೆಯದ ಬಾಲಕಿ ಗರ್ಭಿಣಿಯಾದ ಹಿನ್ನೆಲೆಯಲ್ಲಿ 18ರ ಹರೆಯದ ಸ್ನೇಹಿತನ ವಿರುದ್ಧ ಬೇಡಗಂ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ. ಈ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ಒಂದೂವರೆ ತಿಂಗಳ ಗರ್ಬಿಣಿಯಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಮುಳ್ಳೇರಿಯ ನಿವಾಸಿಯಾದ 18ರ ಹರೆಯದ ಯುವಕನ ವಿರುದ್ಧ ಕೇಸು ದಾಖಲಿಸಲಾಗಿದೆ.
ಕಳೆದ ಸೆಪ್ಟಂಬರ್‌ನಲ್ಲಿ ಯುವಕ ಮನೆಗೆ ತಲುಪಿ ಬಾಲಕಿಗೆ ಕಿರುಕುಳ ನೀಡಿದ್ದನೆಂದು ಹೇಳಲಾಗುತ್ತಿದೆ. ಇತ್ತೀಚೆಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ತಲುಪಿಸಿ ತಪಾಸಣೆಗೊಳಪಡಿಸಿದಾಗ ಈಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.ಈ ವಿಷಯವನ್ನು ವೈದ್ಯರು ಪೊಲೀಸರಿಗೆ ತಿಳಿಸಿದ್ದರು. ಬಳಿಕ ಬಾಲಕಿಯ ಹೆತ್ತವರು ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.






