ಮೀಂಜ: ರಸ್ತೆ ಬದಿಗಳಲ್ಲಿನ ಪೊದೆಗಳು ಹಾಗೂ ಕಳೆ ಗಿಡಗಳನ್ನು ತೆರವುಗೊಳಿಸಬೇಕೆಂದು ಆಟೋರಿಕ್ಷಾ ಚಾಲಕರ ಸಂಘ ಮೀಯಪದವು ಇದರ ವತಿಯಿಂದ ಮೀಂಜ ಪಂಚಾಯತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗೆ ಮನವಿ ನೀಡಲಾಗಿದೆ. ರಸ್ತೆ ಬದಿಗಳಲ್ಲಿ ಪೊದೆ ಹಾಗೂ ಕಳೆ ಗಿಡಗಳು ಬೆಳೆದಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಎದುರುಗಡೆ ಯಿಂದ ಬರುವ ವಾಹನಗಳು ಸರಿಯಾಗಿ ಕಾಣದೆ ಅಪಘಾತ ಸಂಭವಿಸುವ ಸಾಧ್ಯತೆಯೂ ಇದೆ. ಅಲ್ಲದೆ ರಸ್ತೆ ಬದಿಯಲ್ಲಿ ಪೊದೆ ತುಂಬಿ ಕೊಂಡ ಹಿನ್ನೆಲೆಯಲ್ಲಿ ಪಾದಚಾರಿಗಳಿಗೆ ನಡೆದು ಹೋಗಲು ಕೂಡಾ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.






