ಮಂಜೇಶ್ವರ ಬ್ಲೋಕ್ ಪಂ. ಅಧ್ಯಕ್ಷ ರಾಜೀನಾಮೆಗೆ ಬಿಜೆಪಿ ಆಗ್ರಹ

ಮಂಜೇಶ್ವರ: ಮಂಜೇಶ್ವರ ಬ್ಲಾಕ್ ವ್ಯಾಪ್ತಿಯಲ್ಲಿ ಬಡ ಜನತೆಗೆ ಸಿಗಬೇಕಾದ ಪಿಎಂ ಅವಾಸ್ ಯೋಜನೆಯ ೧೭ಲಕ್ಷ ರೂ.ಗಳನ್ನು ಅವ್ಯವಹಾರ ನಡೆಸಿರುವುದರ ಬಗ್ಗೆ ಸಮಗ್ರ ತನಿಖೆ ನಡೆಸಲು ಬಿಜೆಪಿ ಮಂಡಲ ಸಮಿತಿ ಪ್ರಧಾನಮಂತ್ರಿ ಕಚೇರಿಗೆ ದೂರು ನೀಡಿದೆ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ತಿಳಿಸಿದ್ದಾರೆ. ಅವ್ಯವಹಾರ ಹಿನ್ನೆಲೆಯಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲ ತಂಙಳ್ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ ಆಗ್ರಹಿಸಿದ್ದಾರೆ. ಬಡವರ ಮನೆ ನಿರ್ಮಾಣಕ್ಕೆ ಕೇಂದ್ರ ನೀಡುವ ಹಣವನ್ನು ಲಪಟÁಯಿಸಿ ಮುಸ್ಲಿಂ ಲೀಗ್ ಆಡಳಿತದ ಬ್ಲಾಕ್ ಹಾಗೂ ಪಂಚಾಯತ್‌ಗಳು ಕೇಂದ್ರ ಸರಕಾರ ಹಣ ನೀಡಿಲ್ಲ ಎಂದು ಸುಳ್ಳು ಹೇಳಿ ಬಡವರ ಮನೆ ನಿರ್ಮಾಣಕ್ಕೆ ಅಡ್ಡಿ ಮಾಡುತ್ತಿದೆ. ಪಿಎಂ ಆವಾಸ್ ಯೋಜನೆಯ ಎಲ್ಲಾ ಮೊತ್ತವನ್ನು ಬ್ಲಾಕ್ ಪಂಚಾಯತ್ ಕೂಡಲೇ ಬಿಡುಗಡೆಗೊಳಿಸಬೇಕು ಮತ್ತು ಬ್ಲಾಕ್ ಪಂಚಾಯತ್ ಆಡಳಿತ ಸಮಿತಿ, ಅಧ್ಯಕ್ಷ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.

You cannot copy contents of this page