ಕಾಸರಗೋಡು: ೧೪ರ ಹರಯದ ಬಾಲಕನಿಗೆ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಐದು ಮಂದಿ ಆರೋಪಿಗಳನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಮೊಗ್ರಾಲ್ ಪುತ್ತೂರು ಕುನ್ನಿಲ್ ಮತ್ತು ಪರಿಸರ ನಿವಾಸಿಗಳಾದ ಮೊಹಮ್ಮದ್ ರಿಯಾಸ್ (38), ಅಬ್ದುಲ್ಲ (55), ಬಶೀರ್ (47), ಸುಲೈಮಾನ್ (40) ಮತ್ತು ಸಲಾವುದ್ದೀನ್ (50) ಎಂಬವರು ಬಂಧಿತ ಆರೋಪಿಗಳು. ಕಾಸರಗೋಡು ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ ೯ನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕನನ್ನು ಕಳೆದ ಒಂದು ತಿಂಗಳಲ್ಲಿ ವಿವಿಧ ದಿನಗಳಲ್ಲಾಗಿ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ಆರೋಪಿಗಳ ವಿರುದ್ಧ ಕಾಸರಗೋಡು ಪೊಲೀಸರು ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.






