ಕಾಸರಗೋಡು: ಕಾಸರಗೋಡು ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ 14ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಆಕೆಯ ಸಂಬಂಧಿಕ ಸೇರಿ ಇಬ್ಬರ ವಿರುದ್ಧ ಕಾಸರಗೋಡು ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಆಗಸ್ಟ್ ತಿಂಗಳಲ್ಲಿ ಓಣಂ ಪರೀಕ್ಷೆ ಬಳಿಕ ಬಾಲಕಿಯನ್ನು ಮೈಸೂರಿಗೆ ಕರೆದೊಯ್ದು ಅಲ್ಲಿ ಸಂಬಂಧಿಕನಾದ ಓರ್ವ ಆಕೆಗೆ ಲೈಂಗಿಕ ಕಿರುಕುಳ ನೀಡಿದನೆಂದೂ, ನಂತರ ಇನ್ನೋರ್ವ ಅಕೆಯನ್ನು ಮೈಸೂರಿನಿಂದ ಮಂಗಳೂರಿಗೆ ಬರುವ ವೇಳೆ ಬಸ್ನಲ್ಲಿ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.







