ಮಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಬೆಂಗಳೂರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ಜಂಟಿ ಆಶ್ರಯದಲ್ಲಿ ಪ್ರಥಮ ಕನ್ನಡ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನ ಬೆಂಗಳೂರಿನಲ್ಲಿ ಜರಗಿದ್ದು, ಇದರಲ್ಲಿ ದಂತ ವೈದ್ಯಕೀಯ ವಿಭಾಗದಿಂದ ಡಾ. ಮುರಳೀಮೋಹನ್ ಚೂಂತಾರುರಿಗೆ ಶೇಷ್ಠ ವೈದ್ಯ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಹಂಪಾ ನಾಗರಾಜಯ್ಯ ಗೌರವಿಸಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಭಗವಾನ್, ರಾಜ್ಯ ವೈದ್ಯಕೀಯ ಪರಿಷತ್ನ ಅಧ್ಯಕ್ಷ ಡಾ. ಯೋಗನಾಂದ ರೆಡ್ಡಿ, ಡಾ. ಯೋಗಣ್ಣ ಉಪಸ್ಥಿತರಿದ್ದರು.






