ಕೇಂದ್ರೀಯ ವಿವಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಸಾವು
ಕಾಸರಗೋಡು: ಪೆರಿಯದಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಸಾವನ್ನ ಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಪ್ರಸ್ತುತ ವಿಶ್ವವಿದ್ಯಾಲಯದ ಎಂಎಡ್ ದ್ವಿತೀಯ ವರ್ಷದ ವಿದ್ಯಾರ್ಥಿ, ಉತ್ತರ ಪ್ರದೇಶದ ಘಾಸಿಪುರ ನಿವಾಸಿ ನಿತೀಶ್ ಯಾದವ್(೨೮) ಸಾವನ್ನಪ್ಪಿದ ಯುವಕ. ನಿತೀಶ್ ನಿನ್ನೆ ಕಾಣಿಸದ ಹಿನ್ನೆಲೆಯಲ್ಲಿ ಸಹಪಾಠಿಗಳು ಮೊಬೈಲ್ ಫೋನ್‌ನಲ್ಲಿ ಆತನನ್ನು ಸಂಪರ್ಕಿಸಿದರೂ ಅದಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಲಭಿಸಲಿಲ್ಲ. ಇದರಿಂದ ಹಾಸ್ಟೆಲ್‌ಗೆ ನಿನ್ನೆ ರಾತ್ರಿ ಹೋಗಿ ನೋಡಿದಾಗ ಅಲ್ಲಿ ನಿತೀಶ್ ಫ್ಯಾನ್‌ಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಿಷಯ ತಿಳಿದ ಬೇಕಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದರು. ಮೃತದೇಹವನ್ನು ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.