ಎ.26ರಂದು ರಾಜ್ಯದಲ್ಲಿ ಸಾರ್ವಜನಿಕ ರಜೆ

ಕಾಸರಗೋಡು: ಲೋಕಸಭಾ ಚುನಾವಣೆಯ ದಿನವಾದ ಎಪ್ರಿಲ್ 26ರಂದು ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಸರಕಾರಿ ಕಚೇರಿ ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸುತ್ತದೆ. ವಾಣಿಜ್ಯ ಸಂಸ್ಥೆಗಳಿಗೆ ವೇತನ ಸಹಿತ ರಜೆಯಾಗಿದೆ. ಕಮರ್ಶಿಯಲ್ ಎಸ್ಟಾಬ್ಲಿಷ್‌ಮೆಂಟ್ ಕಾಯಿದೆಯ ಅಧೀನದಲ್ಲಿರುವ ಖಾಸಗಿ ಸಂಸ್ಥೆಗಳು, ಖಾಸಗಿ ಕೈಗಾರಿಕಾ ಕೇಂದ್ರಗಳು ಮೊದಲಾದವುಗಳಲ್ಲಿ ರಜೆಯನ್ನು ಘೋಷಿಸಲು ಲೇಬರ್ ಕಮಿಷನರ್ ಅಗತ್ಯದ ಕ್ರಮಗಳನ್ನು ಕೈಗೊಳ್ಳಬೇಕು. ರಜೆಯಂದು ವೇತನವನ್ನು ನೀಡದಿರುವುದು ಅಥವಾ ಕಡಿತಗೊಳಿಸುವುದು ಮಾಡಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

RELATED NEWS

You cannot copy contents of this page