ಕಾಸರಗೋಡು: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಳಿಕ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚೆರ್ಕಳ ಬೇರ್ಕ ಹೌಸ್‌ನ ಕುಂಞಿ ಮಾಹಿನ್ ಅಶ್ರಫ್ ಕೆ.ಕೆ. (30) ಬಂಧಿತ ಆರೋಪಿ. ಈತನ ವಿರುದ್ಧ ೨೦೨೨ರಲ್ಲಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಆ ಬಳಿಕ ಆತ ತಲೆಮರೆಸಿಕೊಂಡಿದ್ದನು. ಆತನ ಬಂಧನಕ್ಕಾಗಿ ಎಲ್.ಪಿ. ವಾರೆಂಟ್ ಹೊರಡಿಸಲಾಗಿತ್ತು. ಅದಾದ ಮೂರು ವರ್ಷಗಳ ಬಳಿಕ ಚೆರ್ಕಳದಿಂದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಬಿ.ವಿ. ವಿಜಯ್ ಭರತ್ ರೆಡ್ಡಿಯವರ ನಿರ್ದೇಶದ ಪ್ರಕಾರ ಕಾಸರಗೋಡು ಎಎಸ್‌ಪಿ ಡಾ. ನಂದಗೋ ಪಾಲ್ ಎಂ.ಎ.ಯವರ ಮೇಲ್ನೋಟದಲ್ಲಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಜಿತ ಕೆ.ಯವರ ನೇತೃತ್ವದಲ್ಲಿ ಸಿವಿಲ್ ಪೊಲೀಸ್ ಆಫೀಸರ್ ಶ್ರುತಿ, ಚಾಲಕ ಎ.ಎಸ್‌ಐ ನಾರಾಯಣ, ಸಬ್ ಡಿವಿಷನಲ್ ಸ್ಕ್ವಾಡ್ ಸದಸ್ಯರುಗಳಾಗಿರುವ ಸಿಪಿಒಗಳಾದ ರಾಜೇಶ್ ಮತ್ತು ಸಜೀಶ್ ಎಂಬವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.







