ಆರಿಕ್ಕಾಡಿ ಟೋಲ್ ಸಂಗ್ರಹ ನಿಲುಗಡೆ: ಬಿಜೆಪಿ ಮಂಜೇಶ್ವರ ಮಂಡಲ ಸಮಿತಿಯಿಂದ ಅಭಿನಂದನೆ

ಕುಂಬಳೆ: ಆರಿಕ್ಕಾಡಿ ಟೋಲ್ ನಿಲುಗಡೆಗೊಳಿಸುವಂತೆ ಹೆದ್ದಾರಿ ಇಲಾಖೆಗೆ ಆದೇಶ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಇದಕ್ಕಾಗಿ ನಿರಂತರ ಪ್ರಯತ್ನ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ, ಬಿಜೆಪಿ ಜಿಲ್ಲಾ ಸಮಿತಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ತಿಳಿಸಿದೆ. ಟೋಲ್ ವಿಚಾರದಲ್ಲಿ ಬೀದಿ ನಾಟಕ ಮಾಡಿ ರಾಜಕೀಯ ಲಾಭ ಪಡೆಯಲು ಶಾಸಕರು ನಡೆಸಿದ ನಾಟಕ ಜನತೆಗೆ ತಿಳಿದಿದೆ ಎಂದು ಬಿಜೆಪಿ ಮಂಡಲ ಸಮಿತಿ ತಿಳಿಸಿದೆ. ಬಿಜೆಪಿ ಕೇಂದ್ರ ಸಚಿವರಲ್ಲಿ ಈ ವಿಷಯದಲ್ಲಿ ಪ್ರಾಮಾಣಿಕವಾಗಿ ಮಾತನಾಡಿ ಸಮಸ್ಯೆಗೆ ಪರಿಹಾರ ಕಂಡಿದೆ ಎಂದು ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ. ತಿಳಿಸಿದ್ದಾರೆ.

RELATED NEWS

You cannot copy contents of this page