ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ದೃಢಕಲಶ ನಾಳೆ

ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಇತ್ತೀಚೆಗೆ ಜರಗಿದ್ದು, ಕ್ಷೇತ್ರದಲ್ಲಿ ದೃಢಕಲಶ ನಾಳೆ ನಡೆಯಲಿದೆ. ಇಂದು ಸಂಜೆ 7 ಗಂಟೆಗೆ ಪುಣ್ಯಾಹ ವಾಚನ, ರಾಕ್ಷೋಘ್ನ ಹೋಮ, ವಾಸ್ತುಬಲಿ ಮೊದಲಾದ ವೈದಿಕ ಕಾರ್ಯಕ್ರಮಗಳು ಜರಗಲಿದೆ. ನಾಳೆ ಬೆಳಿಗ್ಗೆ ೭ಕ್ಕೆ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ,9.30ಕ್ಕೆ ಮಹಾ ರುದ್ರಯಾಗ ಆರಂಭ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ, ಅಪರಾಹ್ನ 2.30ರಿಂದ ಅಭಿನಂದನಾ ಸಮಾರಂಭ ಜರಗಲಿದೆ.  ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ. ವಸಂತ ಪೈ ಅಧ್ಯಕ್ಷತೆ ವಹಿಸುವರು. ಆಡಳಿತ ಮೊಕ್ತೇಸರ ವೆಂಕಟ್ರಮಣ ಭಟ್ ಚಂಬಲ್ತಿಮಾರ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ರೈ ಪೆರಡಾಲಗುತ್ತು, ಗೌರವಾಧ್ಯಕ್ಷ ಜಯದೇವ ಖಂಡಿಗೆ, ಮೊಕ್ತೇಸರರಾದ ಸೀತಾರಾಮ ನವಕಾನ, ಕೃಷ್ಣ ಬದಿಯಡ್ಕ, ಕೋಶಾಧಿಕಾರಿ ಸರ್ಯನಾರಾಯಣ ಬಿ., ರಕ್ಷಾಧಿಕಾರಿ ಕೃಷ್ಣಮೂರ್ತಿ ಪುದುಕೋಳಿ, ಕೊಡ್ಯಮ್ಮೆ ಅರಮನೆಯ ಕೃಷ್ಣರಾಜ ಬಲ್ಲಾಳ್ ಉಪಸ್ಥಿತರಿರುವರು. ರಾತ್ರಿ 7.30ರಿಂದ ರಂಗಪೂಜೆ ನಡೆಯಲಿದೆ.

RELATED NEWS

You cannot copy contents of this page