ಬದಿಯಡ್ಕ: ಶಾಲೆಗೆ ತೆರಳುತ್ತಿದ್ದ 13ರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ಬಗ್ಗೆ ದೂರಲಾಗಿದೆ. ಕಳೆದ ದಿನ ಬೆಳಿಗ್ಗೆ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಒಬ್ಬಳೇ ನಡೆದು ಶಾಲೆಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ವ್ಯಕ್ತಿಯೋರ್ವ ಬಾಲಕಿಯ ದೇಹವನ್ನು ಸ್ಪರ್ಶಿಸಿದ್ದಾನೆನ್ನಲಾಗಿದೆ. ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದು ಅಷ್ಟರಲ್ಲಿ ವ್ಯಕ್ತಿ ಓಡಿ ಪರಾರಿಯಾಗಿದ್ದಾನೆ. ಬಾಲಕಿ ಶಾಲೆಗೆ ತಲುಪಿ ಸಹಪಾಠಿಗಳಲ್ಲಿ ವಿಷಯ ತಿಳಿಸಿದ್ದು, ಅನಂತರ ಪೊಲೀಸರಿಗೆ ದೂರು ನೀಡಲಾಗಿದೆ. ಇದರಂತೆ ಪೋಕ್ಸೋ ಪ್ರಕಾರ ಕೇಸು ದಾಖಲಿಸಿಕೊಂಡ ಬದಿಯಡ್ಕ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ಶೋಧ ಆರಂಭಿಸಿದ್ದಾರೆ. ಇದರಂಗವಾಗಿ ವಿವಿಧೆಡೆಗಳಲ್ಲಿರುವ ಸಿಸಿ ಟಿವಿ ಕ್ಯಾಮರಾಗಳ ದೃಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.






