ರಶೀದ್ ಕೊಲೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಗೆ
ಕುಂಬಳೆ: ಕೊಲೆ ಪ್ರಕರಣದ ಆರೋಪಿಯನ್ನು ಬೈಕ್‌ನಲ್ಲಿ ಕೊಂ ಡೊಯ್ದು ಮದ್ಯಪಾನಗೈದ ಬಳಿಕ ತಲೆಗೆ ಕಲ್ಲು ಹಾಕಿ ಕೊಲೆಗೈದ ಪ್ರಕರಣದ ಆರೋಪಿಯನ್ನು ಪೊಲೀಸರ ಕಸ್ಟಡಿಗೆ ಬಿಟ್ಟುಕೊಡಲಾಗಿದೆ. ಪೆರುವಾಡ್‌ನಲ್ಲಿ ವಾಸಿಸುತ್ತಿದ್ದ ಅಭಿಲಾಷ್ ಯಾನೆ ಹಬೀಬ್ (೩೨) ಎಂಬಾತನನ್ನು ಮೂರು ದಿನಗಳ ಕಾಲಕ್ಕೆ ಕುಂಬಳೆ ಪೊಲೀಸ್ ಇನ್‌ಸ್ಪೆಕ್ಟರ್ ಇ. ಅನೂಪ್‌ರ ಕಸ್ಟಡಿಗೆ ಬಿಟ್ಟು ಕೊಡಲಾಗಿದೆ. ಅಭಿಲಾಷ್ ಯಾನೆ ಹಬೀಬ್ ಶಾಂತಿಪಳ್ಳದ ಅಬ್ದುಲ್ ರಶೀದ್ ಯಾನೆ ಸಮೂಸ ರಶೀದ್ (೩೮)ನನ್ನು ಕೊಲೆಗೈದ ಪ್ರಕರಣದ ಆರೋಪಿಯಾಗಿದ್ದಾನೆ. ಈ ತಿಂಗಳ ೧ರಂದು ರಾತ್ರಿ ಸಮೂಸ ರಶೀದ್ …