ಮೆರವಣಿಗೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷರೂ ಸೇರಿ ೨೦ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸು

ಕಾಸರಗೋಡು: ಮೋದಿ ಉಪನಾಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್‌ನ  ನ್ಯಾಯಾಲಯ ನೀಡಿದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಿನ್ನೆ ನಗರದಲ್ಲಿ ನಡೆದ ಮೆರವಣಿಗೆ ಸಂಬಂಧಿಸಿ  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಕೆ. ಫೈಸಲ್ ಮತ್ತು ಮನಾಫ್ ನುಳ್ಳಿಪ್ಪಾಡಿ ಸೇರಿದಂತೆ ೨೦ ಮಂದಿಯ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಅನುಮತಿ ಪಡೆಯದೆ ಮೆರವಣಿಗೆ ನಡೆಸುವಿಕೆ ಮತ್ತು  ಆ ಮೂಲಕ ರಸ್ತೆಯಲ್ಲಿ ಸಾರಿಗೆ ಸಂಚಾರಕ್ಕೆ ಅಡಚಣೆ ಸೃಷ್ಟಿಸುವಿಕೆ ಎಂಬೀ ಆರೋಪದಂತೆ …

ರೈಲು ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

ಉಪ್ಪಳ: ಅಪರಿಚಿತ ಯುವಕನ ಮೃತದೇಹ ರೈಲು ಹಳಿಯಲ್ಲಿ ಪತ್ತೆಯಾಗಿದೆ. ಉಪ್ಪಳ ಗೇಟ್ ಬಳಿ ನಿನ್ನೆ ಮಧ್ಯಾಹ್ನ ೧೨ ಗಂಟೆ ವೇಳೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ ಮಂಜೇಶ್ವರ ಪೊಲೀಸರು ತಲುಪಿ ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ತಲುಪಿಸಿ ದ್ದಾರೆ. ಮೃತ ವ್ಯಕ್ತಿಗೆ ೩೦ ವರ್ಷ ಪ್ರಾಯ  ಅಂದಾಜಿಸಲಾಗಿದ್ದು, ಪ್ಯಾಂಟ್ ಹಾಗೂ ಶರ್ಟ್ ಧರಿಸಿದ್ದಾನೆ.