ಮಾನಸಿಕ ಅಸ್ವಸ್ಥತೆ ಹೊಂದಿರುವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ 167 ವರ್ಷ ಸಜೆ ಮತ್ತು 5.50 ಲಕ್ಷ ರೂ. ಜುಲ್ಮಾನೆ
ಕಾಸರಗೋಡು: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ 14ರ ಹರೆಯದ ಬಾಲಕಿಯನ್ನು ರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾಗಿರುವ ರಿಕ್ಷಾ ಚಾಲಕನಿಗೆ ಕಾಸರಗೋಡು ಫಾಸ್ಟ್ ಟ್ರ‍್ಯಾಕ್ ಸ್ಪೆಷಲ್ ನ್ಯಾಯಾಲಯದ ನ್ಯಾಯಾಧೀಶರಾದ ರಾಮು ರಮೇಶ್ಚಂದ್ರ ಬಾನು ಅವರು ವಿವಿಧ ಸೆಕ್ಷನ್ಗಳಲ್ಲಾಗಿ ಒಟ್ಟು 167 ವರ್ಷ ಕಠಿಣ ಸಜೆ ಹಾಗೂ 5,50,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 22 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.ಚೆಂಗಳ ಪಾಣಳಂ ನಿವಾಸಿ ಉಸ್ಮಾನ್ ಅಲಿಯಾಸ್ …