ಮೊಟಕುಗೊಂಡ ಮರಣೋತ್ತರ ಪರೀಕ್ಷೆ : ಜನರಲ್ ಆಸ್ಪತ್ರೆ ಮುಂದೆ ಬಿಜೆಪಿ ಜಿಲ್ಲಾಧ್ಯಕ್ಷೆ ನೇತೃತ್ವದಲ್ಲಿ ಪ್ರತಿಭಟನೆ
ಕಾಸರಗೋಡು: ಮೃತದೇಹವನ್ನು ಸಕಾಲದಲ್ಲಿ ಮರಣೋತ್ತರ ಪರೀಕ್ಷೆ ನಡೆಸದಿರುವುದನ್ನು ಪ್ರತಿಭಟಿಸಿ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನೇತೃತ್ವದಲ್ಲಿ ಕಾರ್ಯಕರ್ತರು ಕಾಸರಗೋಡು ಜನರಲ್ ಆಸ್ಪತ್ರೆ ಮುಂದೆ ನೆಲದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಬೆದ್ರಡ್ಕದಲ್ಲಿರುವ ಖಾಸಗಿ ಸಂಸ್ಥೆಯೊಂದರ ಗೋದಾಮಿನ ವಾಹನ ಚಾಲಕ ಮಧೂರು ಶಿರಿಬಾಗಿಲು ನಿವಾಸಿ ಚನಿಯಪ್ಪ ಪೂಜಾರಿ (54) ಎಂಬವರು ನಿನ್ನೆ ಕೆಲಸದ ಮಧ್ಯೆ ಕುಸಿದುಬಿದ್ದಿದ್ದರು. ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಗೆ …