ಬೈಕ್ ಢಿಕ್ಕಿ ಹೊಡೆದು ಗಾಯಗೊಂಡಿದ್ದ ಮುಸ್ಲಿಂ ಲೀಗ್ ಕಾರ್ಯಕರ್ತ ನಿಧನ
ಕಾಸರಗೋಡು: ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಮುಸ್ಲಿಂ ಲೀಗ್‌ನ ಸಕ್ರಿಯ ಕಾರ್ಯಕರ್ತ ಮೃತಪಟ್ಟರು. ಮೊಗ್ರಾಲ್ ಪಖ್ವನಗರದ ಕೆ.ವಿ. ಹೌಸ್‌ನ ಕೆ.ವಿ. ಅಬ್ದುಲ್ ಖಾದರ್ (78) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಮೊಗ್ರಾಲ್‌ನಲ್ಲಿ ಅಪಘಾತ ಸಂಭವಿಸಿತ್ತು. ಅಬ್ದುಲ್ ಖಾದರ್ ರಸ್ತೆ ಬದಿ ನಡೆದು ಹೋಗುತ್ತಿದ್ದ ವೇಳೆ ಅಪರಿಮಿತ ವೇಗದಲ್ಲಿ ಬಂದ ಬೈಕ್ ಢಿಕ್ಕಿ ಹೊಡೆದಿತ್ತೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ …
Read more “ಬೈಕ್ ಢಿಕ್ಕಿ ಹೊಡೆದು ಗಾಯಗೊಂಡಿದ್ದ ಮುಸ್ಲಿಂ ಲೀಗ್ ಕಾರ್ಯಕರ್ತ ನಿಧನ”