ರಾಷ್ಟ್ರೀಯ ಹೆದ್ದಾರಿ: ಸರ್ವೀಸ್ ರಸ್ತೆ ಪ್ರವೇಶಿಸದ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು- ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ
ಕಾಸರಗೋಡು: ಸರ್ವೀಸ್ ರಸ್ತೆಗೆ ಪ್ರವೇಶಿಸದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಸೇವೆ ನಡೆಸುತ್ತಿರುವ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿಯ ಮೊಗ್ರಾಲ್ ಪುತ್ತೂರು ಘಟಕದ ಮಹಾಸಭೆ ಆಗ್ರಹಪಟ್ಟಿದೆ. ಹಲವು ಬಸ್‌ಗಳು ಸರ್ವೀಸ್ ರಸ್ತೆಗೆ ಪ್ರವೇಶಿಸದೆ ನೇರವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗುತ್ತಿವೆ. ಇದು ವಿದ್ಯಾರ್ಥಿಗಳು, ವ್ಯಾಪಾರಿಗಳು ಹಾಗೂ ಇತರ ಪ್ರಯಾಣಿಕರನ್ನು ತೀವ್ರ ಸಂಕಷ್ಟದಲ್ಲಿ ಸಿಲುಕಿಸುವಂತೆ ಮಾಡುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಇದಕ್ಕೆ ತುರ್ತು ಪರಿಹಾರ ಕ್ರಮಕೈಗೊಳ್ಳಬೇಕೆಂದು ಸಭೆ ಆಗ್ರಹಪಟ್ಟಿದೆ. ಘಟಕದ ಅಧ್ಯಕ್ಷ ಎಸ್.ಎಂ. …