ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ 11ರಂದು
ಬದಿಯಡ್ಕ: ಬಡಗು ಶಬರಿಮಲೆಯೆಂದೇ ಪ್ರಸಿದ್ಧವಾದ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ನಿರ್ಮಿಸಿದ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ ಮೇ 11ರಂದು ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದೆ. 6.30ಕ್ಕೆ 101 ಚೆಂಡೆ ವಾದ್ಯಗಳೊಂದಿಗೆ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ದ್ವಾರಪೂಜೆ ಹಾಗೂ ಲೋಕಾರ್ಪಣೆ ನಡೆಯಲಿರು ವುದು. ಶ್ರೀ ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶರಾದ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ …