ಸುಳ್ಯಪದವು ಸೇತುವೆ, ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಕಲ್ಲಗ ಚಂದ್ರಶೇಖರ ರಾವ್‌ರಿಂದ ಕರ್ನಾಟಕ ಮುಖ್ಯಮಂತ್ರಿಗೆ ಮನವಿ
ಬೆಳ್ಳೂರು: ಸುಳ್ಯಪದವು ಸೇತುವೆಯ ಪುನರ್ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಬೇಕೆಂದು ವಿನಂತಿಸಿ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ರಾವ್ ಕಲ್ಲಗ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ ಸಲ್ಲಿಸಿದರು. ಮನವಿಯ ಪ್ರತಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೂ ಸಲ್ಲಿಸಲಾಗಿದೆ. ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇರಳ-ಕರ್ನಾಟಕ ಗಡಿ ಪ್ರದೇಶಗಳಲ್ಲಿರುವ ಸುಳ್ಯಪದವು ಸೇತುವೆ ಅಗಲಕಿರಿದಾಗಿದ್ದು, ಅಲ್ಲದೆ ಹೊಂಡಗಳಿಂದ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗುತ್ತಿದೆ. ಮುಳ್ಳೇರಿಯ, ಬೆಳ್ಳೂರು, ಕಿನ್ನಿಂಗಾರು ಭಾಗದ ಜನರಿಗೆ …