ಕನಿಲ ಶ್ರೀ ಭಗವತೀ ಕ್ಷೇತ್ರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಜೇಶ್ವರ: ಕನಿಲ ಶ್ರೀ ಭಗವತೀ ಕ್ಷೇತ್ರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉದ್ಯಮಿ ಲಂಚುಲಾಲ್ ಬಿಡುಗಡೆಗೊಳಿಸಿದರು. ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಕಡಪ್ಪರ, ಪ್ರಧಾನ ಕಾರ್ಯದರ್ಶಿ ನವೀನ್‌ರಾಜ್ ಕೆ.ಜೆ, ಕೋಶಾಧಿಕಾರಿ ಲಕ್ಷ್ಮಣ ಸಾಲಿಯಾನ್, ಕ್ಷೇತ್ರದ ಅಧ್ಯಕ್ಷ ವಿಶ್ವನಾಥ ಕುದ್ರು, ಪ್ರಧಾನ ಕಾರ್ಯದರ್ಶಿ ದೇವದಾಸ್ ವರ್ಕಾಡಿ, ಕೋಶಾಧಿಕಾರಿ ವಿಜಯ ಕನಿಲ, ಕ್ಷೇತ್ರದ ಆಚಾರಪಟ್ಟವರು, ಗುರಿಕ್ಕಾರರು ಉಪಸ್ಥಿತರಿದ್ದರು.