ಕಾರು ಬಾವಿಗೆ ಬಿದ್ದು 6 ಮಕ್ಕಳ ಸಹಿತ 9 ಮಂದಿ ಮೃತ್ಯು
ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ಶಿವಾಜಿನಗರದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಾರು ನಿನ್ನೆ ತಡರಾತ್ರಿ ಶಿವಾಜಿನಗರದ ದಿಂಡೋರಿ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಅದು ದಿಢೀರ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ರಾಜು ರಾಜೀವ ಎಂಬವರ ಬಾವಿಗೆ ಬಿದ್ದಿದ್ದು ಅದು ಭಾರೀ ಆಳದ ಆ …