ಮಲೆಯಾಳಂ ಭಾಷಾ ಮಸೂದೆ ತಕ್ಷಣ ಹಿಂತೆಗೆದುಕೊಳ್ಳಬೇಕು-ಸಿದ್ಧರಾಮಯ್ಯ
ಬೆಂಗಳೂರು: ಕೇರಳ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ಮಲೆಯಾಳಂ ಭಾಷಾ ಮಸೂದೆ-೨೦೨೫ ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ಅದನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸರಕಾರ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರಲ್ಲಿ ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಸುಧೀರ್ಘ ಸಂದೇಶ ಪ್ರಕಟಿಸಿರುವ ಸಿದ್ಧರಾಮಯ್ಯ ಒಂದು ವೇಳೆ ಕಾಸರಗೋಡಿನ ಕನ್ನಡಿಗರ ಹಿತ ನಿರ್ಲಕ್ಷಿಸಿ ಅವರ ಮೇಲೆ ಮಲೆಯಾಳಂ ಭಾಷೆಯನ್ನು ಹೇರಿದಲ್ಲಿ ನಮ್ಮ ಸರಕಾರ ಅವರ ಜೊತೆಗೆ ನಿಂತು ಸರ್ವ ರೀತಿಯ ಬೆಂಬಲ ನೀಡಲಿದೆ ಎಂದೂ ಸಿದ್ಧರಾಮಯ್ಯ ಹೇಳಿದ್ದಾರೆ. …
Read more “ಮಲೆಯಾಳಂ ಭಾಷಾ ಮಸೂದೆ ತಕ್ಷಣ ಹಿಂತೆಗೆದುಕೊಳ್ಳಬೇಕು-ಸಿದ್ಧರಾಮಯ್ಯ”