ಕುಂಬಳೆಯಲ್ಲಿ ಬಸ್ ನಿಲ್ದಾಣ ಕಂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮೊದಲ ಪರಿಗಣನೆ-ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್
ಕುಂಬಳೆ: ಕುಂಬಳೆಯಲ್ಲಿ ಬಸ್ ನಿಲ್ದಾಣ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮೊದಲ ಪರಿಗಣನೆ ನೀಡುವುದಾಗಿ ಕುಂಬಳೆ ಪಂಚಾಯತ್‌ನ ನೂತನ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ತಿಳಿಸಿ ದ್ದಾರೆ. ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇವರು ಕಾರವಲ್‌ನೊಂದಿಗೆ ಈ ಬಗ್ಗೆ ತಿಳಿಸಿದ್ದಾರೆ. ಕುಂಬಳೆ ಪೇಟೆಯ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು. ಕಾಸರಗೋಡು ಹಾಗೂ ಮಂಗಳೂರು ಮಧ್ಯೆ ಪ್ರಧಾನ ಪೇಟೆಯಾಗಿರುವ ಕುಂಬಳೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಬಸ್ ನಿಲ್ದಾಣ, ಶಾಪಿಂಗ್ ಕಾಂಪ್ಲೆಕ್ಸ್‌ಗೆ ಪೇಟೆಯಲ್ಲಿ ಸ್ಥಳ ಲಭ್ಯವಾಗದಿದ್ದಲ್ಲಿ ಬಿಒಟಿ …