ಉದ್ಯೋಗ ಖಾತರಿ ಯೋಜನೆ ಬುಡಮೇಲುಗೊಳಿಸುವ ಕೇಂದ್ರ ಸರಕಾರದ ನೀತಿ ವಿರುದ್ಧ ಸಿಪಿಎಂ ಪ್ರತಿಭಟನೆ
ಪೈವಳಿಕೆ: ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹೆಸರನ್ನು ಬದಲಾಯಿಸಿ ಯೋಜನೆಯನ್ನೇ ಬುಡಮೇಲುಗೊಳಿ ಸಲಿರುವ ಕೇಂದ್ರ ಸರಕಾರದ ನೀತಿಯನ್ನು ಖಂಡಿಸಿ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಡ ಕಾರ್ಮಿಕರಿಗೆ ವರದಾನವಾಗಿದ್ದ ಉದ್ಯೋಗ ಖಾತರಿ ಯೋಜನೆಯ ನಿಬಂಧನೆಗಳನ್ನು ಬದಲಾಯಿಸಿ ಜನರಿಗೆ ಉಪಯೋಗವಿಲ್ಲದಂತೆ ಮಾಡಲು ಕೇಂದ್ರ ಯತ್ನಿಸುತ್ತಿದೆ ಎಂದು ಸಿಪಿಎಂ ಆರೋಪಿಸಿದೆ. ಅಬ್ದುಲ್ ರಜಾಕ್ ಚಿಪ್ಪಾರ್ ಅಧ್ಯಕ್ಷತೆ ವಹಿಸಿದರು. ಮುಖಂಡರಾದ ಕೆ.ಆರ್. ಜಯಾನಂದ ಉದ್ಘಾಟಿಸಿದರು. ಚಂದ್ರ ನಾಯ್ಕ್ ಮಾಣಿಪ್ಪಾಡಿ, ವಿನಯ ಕುಮಾರ್, ಭಾರತಿ …
Read more “ಉದ್ಯೋಗ ಖಾತರಿ ಯೋಜನೆ ಬುಡಮೇಲುಗೊಳಿಸುವ ಕೇಂದ್ರ ಸರಕಾರದ ನೀತಿ ವಿರುದ್ಧ ಸಿಪಿಎಂ ಪ್ರತಿಭಟನೆ”