ಕಾರಿನಲ್ಲಿ ಗಾಂಜಾ ಸಾಗಿಸಿದ ಪ್ರಕರಣ: ಆರೋಪಿಗೆ ಸಜೆ, ಜುಲ್ಮಾನೆ
ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶೆ ಕೆ. ಪ್ರಿಯಾ ಅವರು ಮೂರು ವರ್ಷ ಕಠಿಣ ಸಜೆ ಹಾಗೂ 20,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಕಣ್ಣೂರು ಧರ್ಮಡಂ ಮೀತ್ತಲ್ ಪೀಡಿಗ ನಿವಾಸಿ ಎನ್.ಕೆ. ಸಲ್ಮಾನ್ (26) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2020 ಜೂನ್ 2ರಂದು ಮುಂಜಾನೆ ಕುಂಬಳೆ- …
Read more “ಕಾರಿನಲ್ಲಿ ಗಾಂಜಾ ಸಾಗಿಸಿದ ಪ್ರಕರಣ: ಆರೋಪಿಗೆ ಸಜೆ, ಜುಲ್ಮಾನೆ”