ಶಬರಿಮಲೆ ಚಿನ್ನ ಕಳವು: ಬಂಧಿತ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಪದ್ಮಕುಮಾರ್ ಜೈಲಿಗೆ; ತನಿಖೆ ಮಾಜಿ ಮುಜುರಾಯಿ ಸಚಿವರತ್ತ
ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ಬಂಧಿಸಿದ ತಿರುವಿದಾಂಕೂರು ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ, ಸಿಪಿಎಂ ನೇತಾರ ಹಾಗೂ ಮಾಜಿ ಶಾಸಕನೂ ಆಗಿರುವ ಎ. ಪದ್ಮಕುಮಾರ್ರನ್ನು ಕೊಲ್ಲಂ ವಿಜಿಲೆನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ತಿರುವನಂತಪುರ ಸ್ಪೆಷಲ್ ಜೈಲಿನಲ್ಲಿ ೧೪ ದಿನಗಳ ತನಕ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಇದೇ ಸಂದರ್ಭದಲ್ಲಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಪದ್ಮಕುಮಾರ್ನನ್ನು ತಮ್ಮ ಕಸ್ಟಡಿಗೆ ಬಿಟ್ಟುಕೊಡುವಂತೆ ತನಿಖಾ ತಂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅವರನ್ನು ಇಂದು …