ಹಿರಿಯ ಕಾಂಗ್ರೆಸ್ ನೇತಾರ ನಿಧನ
ಬದಿಯಡ್ಕ: ಹಿರಿಯ ಕಾಂಗ್ರೆಸ್ ನೇತಾರ, ಬದಿಯಡ್ಕ ಪಂಚಾಯತ್ ಪರಿಶಿಷ್ಟ ಜಾತಿ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಚೆನ್ನೆಗುಳಿ ನಿವಾಸಿ ಐತ್ತಪ್ಪ (76) ನಿಧನ ಹೊಂದಿದರು. ಅಸೌಖ್ಯದ ಹಿನ್ನೆಲೆಯಲ್ಲಿ ಹಲವು ತಿಂಗಳುಗಳಿಂದ ಚಿಕಿತ್ಸೆಯಲ್ಲಿದ್ದರು. ಇತ್ತೀಚೆಗೆ ಅಸೌಖ್ಯ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ನಿಧನ ಸಂಭವಿಸಿದೆ. ಕಾಸರಗೋಡು ಜನರಲ್ ಆಸ್ಪತ್ರೆ, ಬದಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಿತ ವಿವಿಧ ಆಸ್ಪತ್ರೆಗಳಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸಿದ್ದರು. ಸೇವೆಯಿಂದ ನಿವೃತ್ತಿಗೊಂಡ ಬಳಿಕ ರಾಜಕೀಯದಲ್ಲಿ …